ಬೆಳಗಾವಿ : ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ‌ಹೊರವಲಯದಲ್ಲಿ ನಡೆದಿದೆ.

ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ(42), ರಾಜಶ್ರೀ ಮುಗೋಳಖೋಡ (36) ಮೃತ ದುರ್ದೈವಿ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದು , ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.