ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು, ಕೂದಲೆಳೆ ಅಂತರದಲ್ಲಿ ಸಚಿವೆ ಹಾಗೂ ಅವರ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಾವುದೋ ಕಾರ್ಯದ ನಿಮಿತ್ತ ಬೆಳಗಾವಿಯಿಂದ ಹೋಗುತ್ತಿದ್ದ ವೇಳೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಾಯಿಯೊಂದು ಅಡ್ಡ ಬಂದ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕೂಡಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.