ಬೆಳಗಾವಿ : ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿಯ ಜಾಂಬೋಟಿ, ಚೋರ್ಲಾದಲ್ಲಿ ಹಲವು ಸೇತುವೆಗಳು ಶಿಥಿಲಗೊಂಡವೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಗೋವಾ ಸಂಚರಿಸುವ ಭಾರಿ ವಾಹನಗಳ ಚಾಲಕರಿಗೆ ಬದಲಿ ಮಾರ್ಗ ಸೂಚಿಸಲಾಗಿದೆ.

ಬೆಳಗಾವಿಯಿಂದ ತೆರಳುವವರು ಪೀರನವಾಡಿಯಿಂದ ಎಡಕ್ಕೆ ತಿರುವು ಪಡೆದುಕೊಂಡು, ಖಾನಾಪುರ ಮಾರ್ಗವಾಗಿ ಗೋವಾಗೆ ಹೋಗುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸೂಚನೆ ನೀಡಿದ್ದಾರೆ.

ದೂಧ್​ ಸಾಗರ ದೇವಸ್ಥಾನದ ಸಮೀಪವಿರಿವ ಅನ್ಮೋದ್ ಘಾಟ್​ನಲ್ಲಿ ಭಾರಿ ಭೂಕುಸಿತ ಉಂಟಾಗಿದ್ದು, ಬೆಳಗಾವಿ-ಗೋವಾ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇಡೀ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆ ಮೇಲೆ ಬಿದ್ದ ಬಂಡೆ ಮತ್ತು ಮಣ್ಣು ತೆರವು ಕಾರ್ಯ ನಡೆಯುತ್ತಿದೆ.