Showing 20 of 115 posts • Page 3 of 6
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಎರಡೂವರೆ ವರ್ಷದಲ್ಲಿ 2,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ ಪ್ರಸಂಗ ಮಂಗಳವಾರ ನಡೆದಿದೆ. ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.
ಚಳಿಗಾಲದ ಅಧಿವೇಶನ ಹಿನ್ನೆಲೆ ಮಂಗಳೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ಮಾಧ್ಯಮ ಗೋಷ್ಠಿ ನಡೆಸಿದರು. ಅಧಿವೇಶನದಲ್ಲಿ ಭಾಗವಹಿಸುವ ಎಲ್ಲರಿಗೂ ವ್ಯವಸ್ಥೆ ಮಾಡಲಾಗುತ್ತಿದೆ.
ಇಲ್ಲಿನ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ನಸುಕಿನಜಾವ ಮೃತಪಟ್ಟಿದ್ದು, ಇತ್ತೀಚಿನ ಕೆಲ ದಿನಗಳಲ್ಲಿ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಆರು ಮಂದಿ ರೈತರಿಗೆ ಸೇರಿದ 20 ಎಕರೆಯಷ್ಟು ಕಬ್ಬು ಸುಟ್ಟು ಹೋದ ಘಟನೆ ಕಾಗವಾಡ ತಾಲ್ಲೂಕಿನ ಉಗಾರ ಬಿಕೆ ಗ್ರಾಮದಲ್ಲಿ ನಡೆದಿದೆ.
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದ ಸಂದರ್ಭವೇ ನಗರದ ಖಡಕ್ ಗಲ್ಲಿಯಲ್ಲಿ ಕಲ್ಲುತೂರಾಟ ನಡೆದಿದೆ.
ದಸರಾ ರಜೆ ಹಿನ್ನೆಲೆ ಮಹಾರಾಷ್ಟ್ರಕ್ಕೆ ಪ್ರವಾಸ ಹೋಗಿದ್ದ ಬೆಳಗಾವಿಯ ಒಂದೇ ಕುಟುಂಬದ 7 ಮಂದಿ ನೀರುಪಾಲಾಗಿದ್ದು, ಮೂವರ ಮೃತದೇಹ ಪತ್ತೆಯಾಗಿದೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರದಲ್ಲಿ ಘಟನೆ ನಡೆದಿದೆ.
ತಾಯಿ, ಇಬ್ಬರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಶಹಾಪುರದ ಜೋಷಿ ಮಾಳ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಕೊರೊನಾ ಸೋಂಕಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೋವಿಡ್ ವೈರಸ್ಗೆ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ 70 ವರ್ಷದ ರೋಗಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನ ಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿದೆ. ಕೇಂದ್ರದ ವಿರುದ್ಧ ಮಾತನಾಡಲು ಆಗದ ರಾಜ್ಯ ಬಿಜೆಪಿ ನಾಯಕರು,
ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ.
ಸಕ್ಕರೆ ತುಂಬಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ನಡೆದಿದೆ.
ಕೆಲಸದೊತ್ತಡ ಹಾಗೂ ಡ್ಯೂಟಿ ಬದಲಾಯಿಸಿದ್ದಕ್ಕೆ ಮನನೊಂದ ಬಸ್ ಮೆಕ್ಯಾನಿಕ್ ಒಬ್ಬರು ಬಸ್ ನಲ್ಲೇ ನೇಣಿಗೆ ಶರಣಾಗಿರುವ ಘಟನೆ ಕೆಎಸ್ಆರ್ಟಿಸಿ ಬೆಳಗಾವಿ ಡಿಪೋ 1ರಲ್ಲಿ ನಡೆದಿದೆ.
ನರೇಗಾ ಕಾರ್ಮಿಕರನ್ನು ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾದ ಭೀಕರ ರಸ್ತೆ ಅಪಘಾತ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಸಂಬಂಧಿಸಿ ಅಪರಿಚಿತ ಟ್ರಕ್ ಡ್ರೈವರ್ ವಿರುದ್ಧ ದೂರು ದಾಖಲಾಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು, ಕೂದಲೆಳೆ ಅಂತರದಲ್ಲಿ ಸಚಿವೆ ಹಾಗೂ ಅವರ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.