ಬೆಂಗಳೂರು: ರಾಜ್ಯದಲ್ಲಿಂದು ಕಳೆದ 24 ಗಂಟೆಗಳಲ್ಲಿ 175 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲೇ 115 ಹೊಸ ಕೇಸ್‌ಗಳು ವರದಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ 352 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 753 ಮಂದಿಗೆ ಡೆಂಗ್ಯೂ ಟೆಸ್ಟ್ ನಡೆಸಿದ್ದು, ಈ ಪೈಕಿ 175 ಮಂದಿಗೆ ಸೋಂಕು ದೃಢವಾಗಿದೆ.
ಬೆಂಗಳೂರಿನಲ್ಲಿ 115, ಬೆಂಗಳೂರು ಗ್ರಾಮಾಂತರ 2, ವಿಜಯಪುರ 9, ಗದಗ 8, ಉತ್ತರ ಕನ್ನಡ 1, ಬಳ್ಳಾರಿ 1, ಮಂಡ್ಯ 26, ಉಡುಪಿ 2, ಕೊಡಗು ಜಿಲ್ಲೆಯಲ್ಲಿ 11 ಪ್ರಕರಣ ಪತ್ತೆಯಾಗಿವೆ. ಸದ್ಯ ಇರುವ 325 ಸಕ್ರಿಯ ಪ್ರಕರಣಗಳ ಪೈಕಿ 45 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

