ಬೆಂಗಳೂರು:  ಕಳೆದ ವರ್ಷಕ್ಕಿಂತ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ಸಾರಿಗೆ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್​ 9 ರಿಂದ ಅಕ್ಟೋಬರ್​ 12 ರವರೆಗೆ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ದಸರಾ ಮಹೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಗಾಂಧಿ ವೃತ್ತದಲ್ಲಿ ದಸರಾ ಮೆರವಣಿಗೆಗೆ ಚಾಲನೆ ಸಿಕ್ಕಿದ್ದು, ಸರಕಾರಿ ಪದವಿ ಕಾಲೇಜಿನಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಶ್ರೀದೇವಿ ಮೂರ್ತಿ ಹಾಗೂ ದಾಸಿಮಯ್ಯರ ಮೆರವಣಿಗೆ ನಡೆಸಲಾಯಿತು. ಮಹಾಲಿಂಗಪುರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಸಾಗಿ ಅಂತಿಮವಾಗಿ ಬನಶಂಕರಿ ದೇವಸ್ಥಾನಕ್ಕೆ ಬಂದು ಸಮಾಪ್ತಿಗೊಂಡಿತು‌.

ಕಳೆದ ವರ್ಷಕ್ಕಿಂತ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲಾಗುತ್ತಿದೆ. ಎಲ್ಲ ಜಾತಿ, ಜನಾಂಗ, ಭಾಷೆಯ ಜನರು ವಿವಿಧ ಜಿಲ್ಲೆಗಳಲ್ಲಿ ಕೂಡ ದಸರಾ ಹಬ್ಬವನ್ನು ಆಚರಣೆ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ.