ಬೆಂಗಳೂರು: ನಿಂತಿದ್ದ ಲಾರಿಗೆ  ಹಿಂಬದಿಯಿಂದ ಮಿನಿ ಬಸ್  ಡಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನೈಸ್‌ರೋಡ್  ಬಳಿ ನಡೆದಿದೆ.

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದೆ ಬರುತ್ತಿದ್ದ ಎರಡು ಕಾರುಗಳು ಕೂಡ ಡಿಕ್ಕಿಯಾಗಿ ಸರಣಿ ಅಪಘಾತ ಉಂಟಾಗಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌