ಬೆಂಗಳೂರು: ಶಾಲಾ ಪ್ರಾಂಶುಪಾಲರು ಬೈದರೆಂದು ವಿದ್ಯಾರ್ಥಿನಿಯೋರ್ವಳು ಶಾಲೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಬಾಪೂಜಿನಗರದ Al ಫಹಾದ್​​ ಶಾಲೆಯಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ 10ನೇ ತರಗತಿ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಬಾಲಕಿ ಕಟ್ಟಡದಿಂದ ಜಿಗಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.