ಆನೇಕಲ್: ಎರಡು ಟಿಪ್ಪರ್ ಲಾರಿಗಳು ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕೋಲಾರ ಹೆದ್ದಾರಿಯ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.

ಎರಡು ಲಾರಿಗಳ ನಡುವೆ ಸಿಲುಕಿ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೂ ಸಹ ಗಂಭೀರ ಗಾಯಗಳಾಗಿದೆ. ಇನ್ನು ಗಾಯಾಳುಗಳನ್ನು ಹೊಸಕೋಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ವಾಹನಗಳನ್ನು ಹೆದ್ದಾರಿಯಿಂದ ಪಕ್ಕಕ್ಕೆ ನಿಲ್ಲಿಸಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.