ಬೆಂಗಳೂರು: ಅತ್ಯಾಚಾರ ಕೇಸ್ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳಿಂದ ಮತ್ತೊಂದು ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. 113 ಸಾಕ್ಷಿಗಳನ್ನು ಒಳಗೊಂಡ 1,632 ಪುಟಗಳ ಚಾರ್ಜ್ಶೀಟ್ ಅನ್ನು ತನಿಖಾಧಿಕಾರಿ ಶೋಭಾರಿಂದ ಸಲ್ಲಿಕೆ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ಇತ್ತೀಗೆಚೆ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಒಳಗೊಂಡ ಸುಮಾರು 2 ಸಾವಿರ ಪುಟಗಳ ಚಾರ್ಜ್ಶೀಟ್ನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಸಲ್ಲಿಸಿದ್ದರು. ಇದೀಗ ಸೋಮವಾರದಂದು ಎರಡನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸದ್ಯ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಜ್ವಲ್, ಸಂತ್ರಸ್ತೆ ಮಗಳಿಗೂ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ಕೊಟ್ಟಿದ್ದ ಅನ್ನೋದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿತ್ತು. ಇನ್ನು ಸಾಕ್ಷ್ಯನಾಶ ಮಾಡುವ ಸಲುವಾಗಿಯೇ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದ ಅಂತಾ, ಹೊಳೆನರಸೀಪುರ ಠಾಣೆಯಲ್ಲಿನ ಕೇಸ್ನ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದರು.

