ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಬೆನ್ನಲ್ಲೇ ನಟ ದರ್ಶನ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯ್ದೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.

ವನ್ಯಜೀವಿ ರಾಯಭಾರಿಯೂ ಆಗಿರುವ ದರ್ಶನ್‌ ಸ್ವತಃ ಕಾನೂನು ಉಲ್ಲಂಘಿಸಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅರಣ್ಯ ಸಿಬ್ಬಂದಿ ಜತೆ ‌ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ವನ್ಯಜೀವಿ ಧಾಮಗಳಿಗೆ ದರ್ಶನ್ ಭೇಟಿ ನೀಡಿದ ಫೋಟೋಗಳು‌ ಸದ್ಯ ವೈರಲ್ ಆಗಿವೆ.

ಇದರೊಂದಿಗೆ ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ನಾಲ್ಕು ಬಾರ್ ಹೆಡೆಡ್ ಗೂಸ್ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ್ದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.