ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 257 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 5, 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ನೈನ್ ಮೂಲಕ ಅರ್ಜಿ ಕಳುಹಿಸಬೇಕು.
ಹುದ್ದೆ ವಿವರ: 68 ಅಂಗನವಾಡಿ ಕಾರ್ಯಕರ್ತರು(Anganwadi Worker) ಮತ್ತು 257 ಅಂಗನವಾಡಿ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು.
ಅಂಗನಾಡಿ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 19 ರಿಂದ 35 ವರ್ಷದ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಆಯ್ಕೆ ಹೇಗೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ ಅನ್ವನ್ ಮೂಲಕ ಅರ್ಜಿ ಭರ್ತಿಗೆ ಮುಂದಾಗುವಂತೆ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು ಈ ಹುದ್ದೆಗೆ ಅಭ್ಯರ್ಥಿಗಳು ಸೆಪ್ಟೆಂಬರ್ 5ರೊಳಗೆ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು. ಅಭ್ಯರ್ಥಿಗಳು ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಅಧಿಕೃತ ಜಾಲತಾಣ karnemakaone.kar.nic.inಗೆ ಭೇಟಿ ನೀಡಬಹುದು.

