ಬೆಂಗಳೂರು : ಆರ್ ಸಿಬಿಯ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ ಬೆನ್ನಲ್ಲೇ ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಓಬ್ಬರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಕೆಎಸ್‌ಸಿಎ ಪ್ರತಿನಿಧಿಯೋರ್ವ (ಹೆಸರು ತಿಳಿದು ಬಂದಿಲ್ಲ) ಎಂದು ಗುರುತಿಸಲಾಗಿದೆ. ಸದ್ಯ ಉಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಸುನೀಲ್ ಮ್ಯಾಥ್ಯೂ ಅವರನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆಯಲಾಗಿದೆ. ಇನ್ನೂ ಕೆಎಸ್ ಸಿಎ ಮುಖ್ಯಸ್ಥರ ಮನೆಯ ಮೇಲೆ ಕೂಡ ದಾಳಿ ನಡೆಸಿದ್ದು, ಆದರೆ ಪ್ರಮುಖರೆಲ್ಲಾ ನಿನ್ನೆ ರಾತ್ರಿಯೇ ಎಸ್ಕೇಪ್‌ ಆಗಿದ್ದಾರೆ ಎನ್ನಲಾಗಿದೆ.