ಬೆಂಗಳೂರು: ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದುಕೊಂಡ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೊಂಡೆಕೊಪ್ಪದ ಬಾಣಸವಾಡಿ ನಿವಾಸಿ ನರಸಿಂಹಮೂರ್ತಿ (27) ಮೃತ ಬೈಕ್ ಸವಾರ. ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ, ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಬೈಕ್ನಲ್ಲಿ ಸೊಂಡೆಕೊಪ್ಪ ರಸ್ತೆಯ ಲಕ್ಕೇನಹಳ್ಳಿ ಬಳಿ ಬೈಕ್ ನಲ್ಲಿ ಬರುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದುಕೊಂಡಿದ್ದಾರೆ.
ಬಳಿಕ ಸ್ಥಳೀಯರು ಗಮನಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

