ಬೆಂಗಳೂರು: ಬೆಂಗಳೂರಿನ ವಿವಿಧೆಡೆ ಬಾಡಿಗೆ ಮನೆ ಹಾಗೂ ಸ್ಪಾಗಳನ್ನು ಕೇಂದ್ರವಾಗಿಸಿಕೊಂಡು ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಅಕ್ರಮ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು ಆರು ಜನರನ್ನು ಬಂಧಿಸಲಾಗಿದೆ.
ನಗರದ ಕಾಮಾಕ್ಷಿಪಾಳ್ಯ, ಕೆ.ಆರ್. ಪುರಂ, ಕುಮಾರಸ್ವಾಮಿ ಲೇಔಟ್ ಹಾಗೂ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಸತಿ ಮನೆಗಳನ್ನು ಬಾಡಿಗೆಗೆ ಪಡೆದು ಈ ದಂಧೆ ನಡೆಸಲಾಗುತ್ತಿತ್ತು. ಇದರೊಂದಿಗೆ, ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಸ್ಪಾವೊಂದರಲ್ಲೂ ವೇಶ್ಯಾವಾಟಿಕೆ ಜಾಲ ಸಕ್ರಿಯವಾಗಿತ್ತು.
ಈ ಕುರಿತು ಖಚಿತ ಮಾಹಿತಿ ಕಲೆಹಾಕಿದ ಸಿಸಿಬಿ ಪೊಲೀಸರು, ಏಕಕಾಲದಲ್ಲಿ ವಿವಿಧ ಅಡ್ಡೆಗಳ ಮೇಲೆ ಹಠಾತ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಕ್ರಮ ದಂಧೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಜಾಲದ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

