ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಅವರನ್ನು ಇಂದು (ಆಗಸ್ಟ್ 19) ಬಳ್ಳಾರಿಗೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರು ಜೈಲಿನಲ್ಲಿ ದರ್ಶನ್ ಹಾಯಾಗಿದ್ದರು. ಅವರು ಸಿಗರೇಟ್ ಸೇದುತ್ತಿದ್ದ ಫೋಟೋ ಹೊರ ಬರುತ್ತಿದ್ದಂತೆ ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಬಳ್ಳಾರಿಯಲ್ಲೂ ಅವರಿಗೆ ಸವಲತ್ತು ಸಿಗಲಿದೆ ಎಂಬ ಆರೋಪ ಬಂತು. ಆದರೆ, ಕಾರಾಗೃಹ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲು ಉತ್ತರ ಡಿಐಜಿ ವಿಶೇಷ ಆದೇಶ ನೀಡಿದ್ದಾರೆ.

ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಆಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.