ಬೆಂಗಳೂರು : ಹೊಸ ವರ್ಷದ ಮೊದಲ ದಿನವೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಮುಂದಿನ 2 ದಿನ ಇದೇ ವಾತಾವರಣ ಇರಲಿದೆ.

