ದೇವನಹಳ್ಳಿ : ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸರಕಾರ ಮಕ್ಕಳು ಕುಡಿಯುವ ಹಾಲಿಗೆ ಬೆಲೆ ಏರಿಕೆ ಮಾಡಿ ರೈತರಿಗೆ ನಷ್ಟ ಉಂಟುಮಾಡುತ್ತಾ ಜನರ ಬಳಿ ತೆರಿಗೆ ವಸೂಲಿ ಮಾಡುತ್ತಿದ್ದಾರೆ ಎಂದರು.
ರಾಜ್ಯ ಸರಕಾರಕ್ಕೆ ಯಾವುದೇ ನೈತಿಕತೆ ಇಲ್ಲ, ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಕೇಂದ್ರ ಸರಕಾರ ಜನರ ಪರವಾಗಿದ್ದು ಜನರಿಗೆ ಅನುಕೂಲ ಕಲ್ಪಿಸಿ ಸೆಸ್ ಕಡಿಮೆ ಮಾಡಿದೆ. ಆದರೆ ರಾಜ್ಯ ಸರಕಾರ ಜನರಿಗೆ ಬೆಲೆ ಏರಿಕೆಯ ಬಿಸಿ ಹೊರಸಿದ್ದಾರೆ ಎಂದು ದೇವನಹಳ್ಳಿ ತಾಲೂಕಿನ ಬೂದಿಗೆರೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ.
ರೈತರಿಗೆ ಹಾಲಿನ ಬೆಲೆ ಕಡಿಮೆ ಮಾಡಿ ಗ್ರಾಹಕರಿಗೆ ನಾಲ್ಕು ಬಾರಿ ಹಾಲಿನ ಬೆಲೆ ಹೆಚ್ಚಾಗಿ ಮಾಡಿದ್ದಾರೆ. ಸರಕಾರ ಮಾಡಿರುವುದು ಕಾಂಗ್ರೆಸ್ ನವರು ಜನರಿಗೆ ತೆರಿಗೆಯ ಹೊರೆ ಹೆಚ್ಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

