ಬೆಂಗಳೂರು: ಆದಾಯ ಮೀರಿ ಶೇ.488ರಷ್ಟು ಅಕ್ರಮ ಆಸ್ತಿ ಗಳಿಕೆ ಮಾಡಿದ ಆರೋಪ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತವರ ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಪಿಡಿಒ ಡಿ.ಎಂ.ಪದ್ಮನಾಭ, ಅವರ ಪತ್ನಿ ಭವ್ಯ ಮತ್ತು ಅತ್ತೆ ಲಕ್ಷ್ಮಮ್ಮ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.