ಬೆಂಗಳೂರು: ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡಿರುವ ಘಟನೆ ಯಲಹಂಕದ ಚೌಡೇಶ್ವರಿ ಲೇಔಟ್‌ನ ಮನೆಯೊಂದರಲ್ಲಿ ನಡೆದಿದೆ.

ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಯಲಹಂಕದ ಚೌಡೇಶ್ವರಿ ಲೇಔಟ್‌ನ ಮನೆಯೊಂದರಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡಿದೆ. ಸ್ಫೋಟ ಹೇಗಾಯಿತು ಅನ್ನೋದರ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ.

ಸ್ಪೋಟದ ತೀವ್ರತೆಗೆ ಮನೆಗೋಡೆಯ ಒಂದು ಭಾಗವೇ ಛಿದ್ರವಾಗಿದೆ. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಕೃಷ್ಣಮ್ಮ-ರಾಜು ದಂಪತಿಯನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಬಾಗೇಪಲ್ಲಿ ಕೃಷ್ಣಮ್ಮ-ರಾಜು ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇನ್ನೂ ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.