ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಹಗರಣ ನೈತಿಕ ಹೊಣೆ ಹೊತ್ತು ಸಚಿವ ನಾಗೇಂದ್ರ ಅವರು ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎಂಬ ಸುಳಿವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿವೆ. ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಎಂದು ತಿಳಸಿದ್ದಾರೆ.

