ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ಗ್ಯಾಸ್ ಪೈಪ್‌ಗೆ ಹಾನಿಯಾದ ಪರಿಣಾಮ ಅನಿಲ ಸೋರಿಕೆಯಾಗಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ, ಅನಿಲ ಸೋರಿಕೆ ತಡೆಯುವಲ್ಲಿ ಯಶಸ್ವಿಯಾದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ(ಜಿಬಿಎ) ನಡೆಯುತ್ತಿದ್ದ ಕಾಮಗಾರಿ ವೇಳೆ, ಮನೆಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸುವ ನೆಲದೊಳಗೆ ಅಳವಡಿಸಿದ್ದ ಗೇಲ್ ಗ್ಯಾಸ್ ಪೈಪ್‌ಗೆ ಹಾನಿಯಾಗಿತ್ತು. ಅನಿಲ ಸೋರಿಕೆಯಿಂದ ಪಾದಚಾರಿಗಳು ಹಾಗೂ ವಾಹನ ಸವಾರರಲ್ಲಿ ಆತಂಕ ಉಂಟಾಗಿತ್ತು. ಸ್ಥಳದ ಸುತ್ತಮುತ್ತ ಬ್ಯಾರಿಕೇಡ್ ಹಾಕಿ ಸಂಚಾರ ನಿರ್ಬಂಧಿಸಲಾಗಿತ್ತು.
ಅಗ್ನಿಶಾಮಕ ದಳದ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

