ಬೆಂಗಳೂರು: ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಠಾತ್ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಅಗತ್ಯ ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಸದ್ಯ ವೈದ್ಯರ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಸಚಿವರ ಆರೋಗ್ಯ ಪರಿಸ್ಥಿತಿ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿಯು ಶೀಘ್ರದಲ್ಲೇ ಅಧಿಕೃತ ಹೆಲ್ತ್ ಬುಲೆಟಿನ್ ಹೊರಡಿಸುವ ಸಾಧ್ಯತೆಯಿದೆ.
ಅವರ ಆರೋಗ್ಯ ವಿಚಾರಸಲು ಆರೋಗ್ಯ ಸಚಿವ ಯುಟಿ ಖಾದರ್ ಭೇಟಿ ನೀಡಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಎಲ್ಲವೂ ನಾರ್ಮಲ್ ಇದೆ ಎಂದಿದ್ದಾರೆ. ಆರೋಗ್ಯಕ್ಕೆ ಸಂಬಂಧಿಸಿದ ಪರೀಕ್ಷೆಗಳು ನಡೆಯುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಖಾದರ್ ಹೇಳಿದರು.

