ಬೆಂಗಳೂರು: ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾರು ಏನೇ ಅಭಿಪ್ರಾಯ ಹೇಳಲಿ.ಜನರ ಜತೆ ಚರ್ಚೆ ಮಾಡಿದ ಬಳಿಕ ನನ್ನ ಅಭಿಪ್ರಾಯ ತೀರ್ಮಾನಿಸುತ್ತೇನೆ. ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಹೇಳಿದ್ದಾರೆ.

ರಾಜಕಾರಣಿಗಳ ಅಂತ್ಯವನ್ನು ಜನ ತೀರ್ಮಾನಿಸುತ್ತಾರೆ. ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ತಿರುಗೇಟು ನೀಡಿದರು.