ಬೆಂಗಳೂರು: ಸಿಎಂ ಡಿ.ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳಿದ್ದಾರೆ. ಶುಕ್ರವಾರ ಮುಂಜಾನೆ ತೆರಳಿ ವೆಂಕಟೇಶ್ವರ ದೇವರ ದರ್ಶನ ಪಡೆದಿದ್ದಾರೆ. ದೇವಸ್ಥಾನದಲ್ಲಿ ಸೆರೆ ಹಿಡಿದ ಫೋಟೋಗಳನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ಸನ್ನಿಧಿಗೆ ಧರ್ಮಪತ್ನಿಯೊಂದಿಗೆ ಭೇಟಿ ನೀಡಿ, ದೇವರ ದಿವ್ಯ ದರ್ಶನ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ. ಜಗದೋದ್ಧಾರಕ ಶ್ರೀನಿವಾಸನ ಅನುಗ್ರಹವೂ ಪ್ರತಿಯೊಬ್ಬರ ಮೇಲಿರಲಿ, ನಾಡು ಸಮೃದ್ಧಿಯಾಗಲಿ ಎಂದು ಆಶಿಸಿದ್ದಾರೆ.

— DK Shivakumar (@DKShivakumar) June 19, 2026