ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಹತ್ವ ವಿಷಯಗಳ ಕುರಿತು ಡಿಕೆಶಿ ಚರ್ಚೆ ನಡೆಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಹಾಗೂ ಡಿಕೆಶಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ನನ್ನನ್ನು ಭೇಟಿಯಾಗಿ, ಹಲವು ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿದರು’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ‘ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಸಮಾಲೋಚಿಸಲಾಯಿತು’ ಎಂದು ಡಿಕೆಶಿ ತಿಳಿಸಿದ್ದಾರೆ.

— Siddaramaiah (@siddaramaiah) June 16, 2026