ಬೆಂಗಳೂರು : ನ್ಯೂ ಇಯರ್ ಸೆಲಬ್ರೇಷನ್ ಬಳಿಕ ಪಾನಮತ್ತರಾಗಿ ವಾಹನ ಚಲಾಯಿಸುತ್ತಿದ್ದವರಿಗೆ ಬೆಂಗಳೂರು ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ತಡರಾತ್ರಿ ನಗರದಾದ್ಯಂತ 28,127ಕ್ಕೂ ಹೆಚ್ಚು ವಾಹನಗಳ ತಪಾಸಣೆ ಕೈಗೊಂಡ ಸಂಚಾರ ಪೊಲೀಸರು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ಒಟ್ಟು 513 ಪ್ರಕರಣಗಳನ್ನ ದಾಖಲಿಸಿಕೊಂಡಿದ್ದಾರೆ.

ಪಾನಮತ್ತರಾಗಿ ವಾಹನ ಚಲಾಯಿಸುವವರ ವಿರುದ್ಧ ಒಂದು ವಾರಕ್ಕೂ ಮೊದಲೇ ಕಾರ್ಯಾಚರಣೆ ಚುರುಕುಗೊಳಿಸಿದ್ದ ಸಂಚಾರ ಪೊಲೀಸರು, ಕಳೆದ ವಾರ 95,179 ವಾಹನ ಚಾಲಕರನ್ನು ತಪಾಸಣೆಗೊಳಪಡಿಸಿ 1,187 ಪ್ರಕರಣ ದಾಖಲಿಸಿಕೊಂಡಿದ್ದರು.

ನಗರದಲ್ಲಿ ಅತಿವೇಗ ಮತ್ತು ಆಜಾಗರೂಕತೆಯಿಂದ ವಾಹನ ಚಾಲನೆ ಮಾಡುವ ಹಾಗೂ ವ್ಹೀಲಿಂಗ್/ಡ್ರ್ಯಾಗ್ ರೇಸ್‌ನಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ. ಎನ್. ಅನುಚೇತ್ ತಿಳಿಸಿದ್ದರು.