ಬೆಂಗಳೂರು: ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಬಳಿಕ ಹೈಕೋರ್ಟ್​ ಸಹ ಜಾರ್ಜ್​ ಅವರ ಪಾತ್ರವಿಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮೃತ ಗಣಪತಿಯವರ ಸಹೋದರಿ ಸಬೀತಾ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು (ಆಗಸ್ಟ್ 28) ಈ ಅರ್ಜಿ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್​ನ ಆದೇಶವನ್ನು ಎತ್ತಿಹಿಡಿದಿದೆ. ಇದರೊಂದಿಗೆ ಸಬೀತಾ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಈ ಮೂಲಕ ಸಚಿವ ಕೆಜೆ ಜಾರ್ಜ್​​ಗೆ ಬಿಗ್ ರಿಲೀಫ್ ಸಿಕ್ಕಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ / ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್ ಸಲ್ಲಿಸಿದ್ದವು. ದಿವಂಗತ ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ. ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಈ ಸಂಬಂಧ ಕೆ. ಜೆ. ಜಾರ್ಜ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು. ಇದನ್ನು ಪ್ರಶ್ನೆ ಮಾಡಿ ಗಣಮತಿ ಅವರ ಸಹೋದರಿ ಸಬೀತಾ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ, ಸುಪ್ರೀಂರ್ಟ್​ ಸಹ ಸಬೀತಾ ಅವರ ಅರ್ಜಿಯನ್ನು ವಜಾ ಮಾಡಿದೆ.