ಬೆಂಗಳೂರು : ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ದಿಢೀರ್‌ ದಾಳಿ ನಡೆಸಿದ್ದು ಇನ್ನು ಶೋಧ ನಡೆಯುತ್ತಿದೆ. ಇನ್ನು ಅದರಲ್ಲಿ ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದಾಳಿ ನಡೆಸಿದೆ.

ಸೈಟ್ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಸೇರಿದಂತೆ ಹಲವು ದೂರುಗಳು ದಾಖಲಾದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.