ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆಯನ್ನು ನೀಡುತ್ತಿದ್ದರು, ಇನ್ನು ಮುಂದೆ ವಾರದಲ್ಲಿ 6 ದಿನ ಕೊಡುವ ಯೋಜನೆಗೆ ಇಂದು ಚಾಲನೆ ನೀಡಲಾಯಿತು.

ಅಕ್ಷರ ದಾಸೋಹ ಮಧ್ಯಾಹ್ನ ಉಪಾಹಾರ ಯೋಜನೆ ಅಡಿ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್‍ಜೀ ಫೌಂಡೇಶನ್ ಸಹಯೋಗದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.

ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಫೌಂಡೇಶನ್ ಸಂಸ್ಥಾಪಕ ಅಜೀಂ ಪ್ರೇಮ್‍ಜೀ ಚಾಲನೆ ನೀಡಿದರು. ಬಳಿಕ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್‍ಜೀ ಫೌಂಡೇಶನ್ ಈ ಯೋಜನೆಯ MOUಗೆ ಸಹಿ ಹಾಕಿತು.

1,500 ಕೋಟಿ ರೂ. ವೆಚ್ಚದಲ್ಲಿ 3 ವರ್ಷಗಳ ಕಾಲ ಅಜೀಂ ಪ್ರೇಮ್‍ಜೀ ಸಂಸ್ಥೆ ಮಕ್ಕಳಿಗೆ 4 ದಿನ ಮೊಟ್ಟೆ ನೀಡಲಿದೆ. ಸರ್ಕಾರದಿಂದ ಎರಡು ದಿನ ಮತ್ತು ಅಜೀಂ ಪ್ರೇಮ್‍ಜೀ ಫೌಂಡೇಶನ್‍ನಿಂದ 4 ದಿನ ಸೇರಿ ಒಟ್ಟು 6 ದಿನ ಮಕ್ಕಳಿಗೆ ಮೊಟ್ಟೆ ಸಿಗಲಿದೆ.