ಬೆಂಗಳೂರು : ಆಟೋ ಡ್ರೈವರ್ ಗೆ ಬಿಹಾರದ ಯುವತಿ ಚಪ್ಪಲಿಯಿಂದ ಹೊಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಲೋಕೇಶ್ ಯಾವುದೇ ಕಾರಣಕ್ಕೂ ಕೇಸ್ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.
ಬೆಂಗಳೂರಲ್ಲಿ ಮಾತಾಡಿದ ಅವರು, ಚಪ್ಪಲಿಯಿಂದ ಹೊಡೆದಾಗ ನನ್ನ ಮನಸ್ಸಿಗೆ ತುಂಬಾ ಬೇಜಾರಾಗಿದೆ. ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ. ಘಟನೆ ನಡೆದ ಬಳಿಕ ನಾನು ಎರಡು ದಿನ ಮನೆಯವರ ಜೊತೆ ಮಾತನಾಡಿಲ್ಲ. ಮುಖ ತೋರಿಸಲು ಆಗುತ್ತಿರಲಿಲ್ಲ. ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದು ತಿಳಿಸಿದ್ದಾರೆ.
ಚಪ್ಪಲಿಯಿಂದ ಹೊಡೆದ ವೀಡಿಯೋ ವೈರಲ್ ಆದ ಬಳಿಕ ಮಹಿಳೆಯ ವಿರುದ್ಧ ಆಕ್ರೋಶ ಹೆಚ್ಚಾಗಿತ್ತು. ಇದರ ಬೆನ್ನಲ್ಲೇ ಮಹಿಳೆ ಹಾಗೂ ಆಕೆಯ ಪತಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದರು. ಆದ್ರೆ ಆಟೋ ಡ್ರೈವರ್ ಕೋಪ ಕಡಿಮೆಯಾಗಿಲ್ಲ. ಹೀಗಾಗಿ ಕೇಸ್ ವಾಪಸ್ ತೆಗೆದುಕೊಳ್ಳದಿರಲು ತೀರ್ಮಾನ ಮಾಡಿದ್ದಾರೆ.

