ಬೆಂಗಳೂರು: ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಅವಧಿಯನ್ನು ವಿಸ್ತರಿಸಿದೆ. ವಕೀಲರು ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲ ದೇವದತ್ ಕಾಮತ್ ಅವರು ಮನವಿ ಮಾಡಿಕೊಂಡಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ನವೆಂಬರ್ 20ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಲಾಗುವುದು. ನವೆಂಬರ್ 20ಕ್ಕೆ ಅರ್ಜಿಯನ್ನು ವಿಚಾರಣೆ ಮಾಡೋದಾಗಿ ಹೇಳಿದೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಟೆನ್ಷನ್ ಕಮ್ಮಿ ಆಗಿದೆ. ನ್ಯಾಯಮೂರ್ತಿಗಳಾದ ಕೆ.ಕಾಮೇಶ್ವರ ರಾವ್ ಮತ್ತು ಕೆ.ರಾಜೇಶ್ ರೈ ಅವರ ನೇತೃತ್ವದ ವಿಭಾಗೀಯ ಪೀಠದಿಂದ ಆದೇಶ ಹೊರಬಿದ್ದಿದೆ.

