ಬೆಂಗಳೂರು: ಮಾದಾವರ – ರೇಷ್ಮೆ ಸಂಸ್ಥೆ ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ತುರ್ತು ನಿರ್ಗಮನದ ಬಳಿಯ ಸೂಚನಾ ಫಲಕದಲ್ಲಿ ಶಾರ್ಟ್‌ಸರ್ಕ್ಯೂಟ್ ಸಂಭವಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ಮಧ್ಯಾಹ್ನ ಸುಮಾರು 1:30ರ ವೇಳೆಗೆ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಸಣ್ಣ ಪ್ರಮಾಣದ ಅಗ್ನಿ ಅವಘಡ ಇದಾಗಿದ್ದು, ಅಗ್ನಿಶಾಮಕ ತಂಡ ಬೆಂಕಿ ನಂದಿಸಿದೆ.

ಅಗ್ನಿ ಅವಘಡದಲ್ಲಿ ಯಾರಿಗೂ ಸಮಸ್ಯೆಯಾಗಿಲ್ಲ. ನಿಲ್ದಾಣದಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಮೆಟ್ರೋ ರೈಲು ಸಂಚಾರ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ.