ಬೆಂಗಳೂರು: ಸಿಲಿಕಾನ್ ಸಿಟಿಯ ವ್ಯಾಪಾರ ಕೇಂದ್ರ ಚಿಕ್ಕಪೇಟೆಯಲ್ಲಿ ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿಕ್ಕಪೇಟೆ ಸರ್ಕಲ್ ಬಳಿ ಇರುವ ‘ಫಾಸ್ಟ್ ಫುಡ್’ ಹೆಸರಿನ ಹೋಟೆಲ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ.
ಸಿಲಿಂಡರ್ ಸ್ಫೋಟದ ಭೀತಿಯಿಂದ ಸ್ಥಳೀಯರು ಮತ್ತು ಗ್ರಾಹಕರು ದಿಕ್ಕಾಪಾಲಾಗಿ ಓಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ ಈ ಅನಾಹುತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

