ಬೆಂಗಳೂರು : ಆಟೋಮೊಬೈಲ್ ಅಂಗಡಿಯೊಂದಕ್ಕೆ ಬೆಂಕಿ ಬಿದ್ದ ಪರಿಣಾಮ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಬೂದಿಯಾಗಿರುವ ಘಟನೆ ನಗರದ ಜೆಸಿ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಈ ಅಂಗಡಿಯಲ್ಲಿ ಶನಿವಾರ ರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಲಾಯಿತು. ತಕ್ಷಣವೇ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ 4 ತಾಸು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿದೆ. ಅವಘಡದಲ್ಲಿ ಸುಮಾರು 4-5 ಕೋಟಿ ರೂ. ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದೆ.

