ಬೆಂಗಳೂರು: ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬನ್ನೇರುಘಟ್ಟ ರಸ್ತೆಯ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು, ಇನ್ನೂ ಬೆಂಕಿ ಹತೋಟಿಗೆ ಬಂದಿಲ್ಲ. ಪ್ಲಾಸ್ಟಿಕ್ ಗೋಡೌನ್ ಸಮೀಪವೇ ಗ್ಯಾಸ್ ಸಿಲಿಂಡರ್ ಗೋಡೌನ್ ಇತ್ತು.