ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪ್ಲಾಸ್ಟಿಕ್ ಹಾಗೂ ಸ್ಕ್ರಾಪ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮೊಂದು ಧಗಧಗನೆ ಉರಿದಿದೆ. ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ.
ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ, ಗೋದಾಮಿನಲ್ಲಿ ಪ್ಲಾಸ್ಟಿಕ್ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿದ್ದರಿಂದ ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ.ನಆಕಾಶದತ್ತ ದಟ್ಟವಾದ ಕಪ್ಪು ಹೊಗೆ ಆವರಿಸಿಕೊಂಡಿದ್ದು, ಸುತ್ತಮುತ್ತಲಿನ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ತಕ್ಷಣವೇ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಲು ಹರಸಾಹಸ ಪಟ್ಟಿವೆ.
ಬೆಂಕಿಯ ಅಬ್ಬರಕ್ಕೆ ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ಹಾಗೂ ಸ್ಕ್ರಾಪ್ ವಸ್ತುಗಳು ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಅಥವಾ ಅಕ್ಕಪಕ್ಕದ ಕಸಕ್ಕೆ ಹಚ್ಚಿದ ಬೆಂಕಿ ಗೋದಾಮಿಗೆ ವ್ಯಾಪಿಸಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

