ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾದರು.
ನಿವೃತ್ತ ಶಿಕ್ಷಕ ಪುಟ್ಟಮಾದೇಗೌಡ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆಮ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತ ಪುಟ್ಟಮಾದೇಗೌಡ ಅವರಿಗೆ ಸಿ.ಪಿ ಯೋಗೇಶ್ವರ್ ಸೇರಿ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಸಂಸ್ಕಾರವು ಸ್ವಗ್ರಾಮವಾದ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

