ಬೆಂಗಳೂರು: ತೊಗರಿ, ಅವರೆ, ಅಲಸಂದೆ, ರಾಗಿ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಸಿದ್ದು, 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಘಟನೆ ಘಟನೆ ಬೆಂಗಳೂರು ಗ್ರಾಮಾಂತರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗೆದ್ದಲಪಾಳ್ಯ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಎನ್ನುವವರ ಜಮೀನಿನಲ್ಲಿ ಗಾಂಜಾಗಳನ್ನು ಬೆಳೆಸಿದ್ದರು. ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 92 ಸಾವಿರ ರೂ. ಮೌಲ್ಯದ 8 ಕೆಜಿ 700 ಗ್ರಾಂ ತೂಕದ ಒಟ್ಟು 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.

