ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಗ್ರಾಮ್​ಗೆ 285 ರೂನಷ್ಟು ಹೆಚ್ಚಳ ಆಗಿದೆ.

ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಬಹುತೇಕ ಕಡೆ ಇದರ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಗ್ರಾಮ್​ಗೆ 5 ರೂನಿಂದ 20 ರೂವರೆಗೆ ಹೆಚ್ಚಳ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 5 ರೂ ಏರಿ 275 ರೂ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಲೆ 20 ರೂ ಹೆಚ್ಚಳಗೊಂಡು 290 ರೂ ಮುಟ್ಟಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,928 ರೂ. 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,600 ರೂ. 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,946 ರೂಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ ಇದೆ.