ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಯಾವುದೇ ಕಾರಣಕ್ಕೂ ಬಂದ್ ಆಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಕುರಿತು ನಾನು ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದೇನೆ. ಇದೀಗ ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ ಎಂದರು.
ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೆ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಸಚಿವೆ ಸ್ಪಷ್ಟಪಡಿಸಿದರು.

