ಬೆಂಗಳೂರು: ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಮುನ್ಸೂಚನೆ ಇದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯ ಅಬ್ಬರ ನಗರದ ಹಲವೆಡೆ ಮಂಗಳವಾರ ತಡರಾತ್ರಿವರೆಗೆ ಮಳೆ ಸುರಿದಿದೆ.
ದೇವನಹಳ್ಳಿ, ವೈಟ್‌ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ ಮತ್ತು ಯಲಹಂಕ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಬಿದ್ದ ಆಲಿಕಲ್ಲುಗಳ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
ಜನರು ಈ ಅಪರೂಪದ ಹವಾಮಾನವನ್ನು ಸಂಭ್ರಮಿಸುತ್ತಾ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ರಸ್ತೆಗಳ ಮೇಲೆ ಮಂಜು ಮುಸುಕಿದಂತೆ ಆಲಿಕಲ್ಲುಗಳು ಹರಡಿಕೊಂಡಿದ್ದವು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ “ಮಿನಿ ಕಾಶ್ಮೀರ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಸಖತ್ ವೈರಲ್ ಆಗುತ್ತಿವೆ.

