ಬೆಂಗಳೂರು: ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆ ಬಿಜೆಪಿ ಹಾಗೂ ಜೆಡಿಎಸ್​ನಿಂದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದ್ದು, ಇದೇ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.

ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರು ಮಾತಾಡುತ್ತಿದ್ದರು. ಇದೇ ವೇಳೆ ಏಕಾಏಕಿ ಮೂಗಿನಿಂದ ರಕ್ತ ಬಂದಿದೆ.

ಕೂಡಲೇ ಹೆಚ್​.ಡಿ.ಕುಮಾರಸ್ವಾಮಿ ಅವರು ಕರ್ಚಿಫ್​ನಿಂದ ಒರೆಸಿಕೊಂಡಿದ್ದಾರೆ. ಆದರೆ ಅಷ್ಟಕ್ಕೆ ನಿಲ್ಲದೆ ಅಧಿಕವಾಗಿ ರಕ್ತಸ್ರಾವ ಬಂದಿದೆ. ರಕ್ತಸ್ರಾವ ಹೆಚ್ಚಾದಂತೆ ಖಾಸಗಿ ಹೋಟೆಲ್​ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಅವರನ್ನು ಕಳುಹಿಸಿಕೊಡಲಾಗಿದೆ.