ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲ, ಮೂರು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ ಮಾಡಿದೆ.

ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಬೆಂಗಳೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಮುಂದುವರಿದಿದೆ. ಇನ್ನು, ಕರಾವಳಿ ಜಿಲ್ಲೆಗಳು ಮಾತ್ರವಲ್ಲ, ಮಲೆನಾಡು ಭಾಗಗಳಲ್ಲೂ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದೆ.