ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಸುತ್ತಮುತ್ತ ಸಾಧಾರಣ ಮಳೆಯಾದರೆ, ಒಳನಾಡಿನ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.
ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಣ್ಣ ಮಳೆಯಾಗಲಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾದರೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಹಗುರದಿಂದ ಭಾರಿ ಮಳೆಯಾಗಲಿದೆ. ಆಗಸ್ಟ್ 28 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

