ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಯಲ್ಲಿ ಮುಂದಿನ 4 ದಿನ ವ್ಯಾಪಕ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯದ ಒಳನಾಡಿನಲ್ಲಿ ಇಂದು ನಾಳೆ ವ್ಯಾಪಕ ಮಳೆ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು, ನಾಳೆ ಆರೆಂಜ್- ಜುಲೈ 22-23 ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಬೆಳಗಾವಿ ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಿಗೆ 20-22ವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿಗೆ ಸದ್ಯ ಯಾವುದೇ ಅಲರ್ಟ್ ಇಲ್ಲ. ಇಂದು ನಾಳೆ ಹಗುರದಿಂದ ಸಾಧಾರಣ ಮಳೆ ಆಗಲಿದ್ದು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

