ಬೆಂಗಳೂರು: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಜೂನ್ 26ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಪ್ರತ್ಯೇಕ ಕಡೆ ನಿರಂತರ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,
ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ ಇರುವ ಸಾಧ್ಯತೆಯಿದೆ.
ಜೂನ್ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸುರಿಯಲಿದೆ.
ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

