ಬೆಂಗಳೂರು : ರಾಜ್ಯಾದ್ಯಂತ ಸೆ 15 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು, ಭಾಗದಲ್ಲಿ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಚಿಕ್ಕಮಗಳೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾಸನ, ಕೋಲಾರ, ರಾಮನಗರ, ಮಂಡ್ಯ,ಮೈಸೂರು, ವಿಜಯನಗರ, ತುಮಕೂರು, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು, ಚಾಮರಾಜನಗರ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇದ್ದು, ಸಂಜೆಯ ವೇಳೆಗೆ ಉತ್ತಮ ಮಳೆಯಾಗುವ ನಿರೀಕ್ಷೆ ಯಿದೆ. ಆದರೆ ಹವಾಮಾನ ಇಲಾಖೆ ಯಾವುದೇ ಅಲರ್ಟ್ ಘೋಷಣೆ ಮಾಡಿಲ್ಲ.