ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಪ್ರತ್ಯೇಕವಾಗಿ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಆರೆಂಜ್‌ ಅಲರ್ಟ್‌

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಉಡುಪಿ, ಬೀದರ್,ಕಲಬುರಗಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.