ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗಲಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನಿರಂತರ ಗಾಳಿ ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.